ಚಾಮರಾಜನಗರ : ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಗಡಿ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯ ಹುಂಡಿಯಲ್ಲಿ ಸಂಗ್ರಹವಾದ ಹಣ ಎಣಿಕೆ ನಡೆದಿದ್ದು, ದಾಖಲೆಯ 2.29 ಕೋಟಿ ರೂ.ಸಂಗ್ರಹವಾಗಿದೆ. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾ ಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠಾಧ್ಯಕ್ಷ ಶಾಂತ ಮಲ್ಲಿಕಾರ್ಜುನ ಸ್ವಾ ಮಿ ಹಾಗೂ ಮಲೆ ಮಹದೇಶ್ವರಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮರಾ ಕಣ್ಣಾವಲು ಹಾಗೂ ಪೊಲೀಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿತು. ಕೇವಲ 30 ದಿನಗಳಲ್ಲಿ 2,29,67,216ರೂ. ಸಂಗ್ರ ಹವಾಗಿದ್ದು, ಭಕ್ತಾದಿಗಳು ಮಾದಪ್ಪನಿಗೆ ಹಣದ ರೂಪದಲ್ಲಿ ಭಕ್ತಿಯ ಹೊಳೆಯನ್ನೇ ಹರಿಸಿದ್ದಾರೆ. ಇಷ್ಟೇ ಅಲ್ಲದೇ 19ಗ್ರಾಂ ಚಿನ್ನ ಮತ್ತು 1ಕೆಜಿ 200 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯ ರೂಪದಲ್ಲಿ ದೇವರಿಗೆ ಅರ್ಪಿಸಿದ್ದಾರೆ.
