ಪತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಬಳಿಕ ಆಕೆ ದೇಹವನ್ನು ತುಂಡರಿಸಿ ಸೂಟ್‌ಕೇಸ್‌ನಲ್ಲಿ ತುಂಬಿರುವ ಭಯಾನಕ ಘಟನೆ ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡಕನ್ನಹಳ್ಳಿಯ ಮನೆಯೊಂದರಲ್ಲಿ ನಡೆದಿದೆ.
ಮಹಾರಾಷ್ಟ್ರ ಮೂಲದ ರಾಕೇಶ್ ತನ್ನ ಪತ್ನಿ ಗೌರಿ ಅನಿಲ್ ಸಾಂಬೆಕರ್ (32) ಅವರನ್ನು ಕೊಂದು ಬಳಿಕ ಮೃತದೇಹವನ್ನು ತುಂಡರಿಸಿ ಸೂಟ್ ಕೇಸ್ನಲ್ಲಿ ತುಂಬಿಟ್ಟಿದ್ದಾನೆ. ಬಳಿಕ ಈ ವಿಚಾರವನ್ನು ಆಕೆಯ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾನೆ. ಮಹಾರಾಷ್ಟ್ರ ಪೊಲೀಸರ ಮಾಹಿತಿ ಆಧರಿಸಿ ಬೆಂಗಳೂರಿನ ಹುಳಿಮಾವು ಪೊಲೀಸರು ಮನೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ರಾಕೇಶ್ ಮತ್ತು ಗೌರಿ ಅನಿಲ್ ಸಾಂಬೆಕರ್ ದಂಪತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕೆಲವು ವರ್ಷಗಳಿಂದ ದೊಡ್ಡಕಮ್ಮನಹಳ್ಳಿ ವಾಸವಾಗಿದ್ದರು. ಡಿಸಿಪಿ ಸಾರಾ ಫಾತಿಮಾ ಸ್ಥಳಕ್ಕೆ ಭೇಟಿ ನೀಡಿ ಪರಶೀಲನೆ ನಡೆದಿದ್ದಾರೆ.
ಯಾಕಾಗಿ ರಾಕೇಶ್ ಕೊಲೆ ಮಾಡಿ ಈ ಕೃತ್ಯ ಎಸಗಿದ್ದಾನೆ ಎನ್ನುವುದರ ಬಗ್ಗೆ ಅಧಿಕೃತ ಮಾಹಿತಿ ತಿಳಿದು ಬಂದಿಲ್ಲ. ʼʼಮಹಾರಾಷ್ಟ್ರ ಮೂಲದ ರಾಕೇಶ್ ಹಾಗೂ ಗೌರಿ ಅನಿಲ್ ಸಾಂಬೆಕರ್ ದಂಪತಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದರು. ವರ್ಕ್ ಫ್ರಂ ಹೋಂ ಹಿನ್ನೆಲೆಯಲ್ಲಿ ಮನೆಯಿಂದಲೇ ಕೆಲಸ ಮಾಡುತ್ತಿದ್ದರುʼʼ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತನಿಖೆ ಪ್ರಗತಿಯಲ್ಲಿದೆ.