ತೆಲಂಗಾಣ : ಹೈದರಾಬಾದ್‌ನಲ್ಲಿ 2013ರಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾಸಿನ್ ಭಟ್ಕಳ್ ಸೇರಿ ಐವರು ಅಪರಾಧಿಗಳಿಗೆ ನೀಡಿದ್ದ ಮರಣದಂಡನೆಯ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ.
ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್‌ನ ಐವರು ಭಯೋತ್ಪಾದಕರ ಮರಣದಂಡನೆ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಎತ್ತಿಹಿಡಿದಿದೆ. ಈ ಐವರು ಭಯೋತ್ಪಾದಕರು 2013 ರ ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದರು. ಈ ಸ್ಫೋಟದಲ್ಲಿ 18 ಮಂದಿ ಸಾವನ್ನಪ್ಪಿ, 131 ಜನರು ಗಾಯಗೊಂಡಿದ್ದರು.
ನ್ಯಾಯಮೂರ್ತಿಗಳಾದ ಲಕ್ಷ್ಮಣ್ ಮತ್ತು ಪಿ. ಶ್ರೀ ಸುಧಾ ಅವರ ಪೀಠವು, ಐಎಂ ಭಯೋತ್ಪಾದಕರು ಸಲ್ಲಿಸಿದ್ದ ಕ್ರಿಮಿನಲ್ ಪರಿಷ್ಕರಣಾ ಮೇಲ್ಮನವಿಯನ್ನು ವಜಾಗೊಳಿಸಿ, ಎನ್‌ಡಿಎ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ. ವಿಚಾರಣಾ ನ್ಯಾಯಾಲಯ ವಿಧಿಸಿದ ಶಿಕ್ಷೆಯನ್ನು ದೃಢಪಡಿಸಲಾಗಿದೆ ಎಂದು ಪೀಠ ತಿಳಿಸಿದೆ.
ಈ ಮೊದರಲು ಐಎಂ ಸಹ ಸಂಸ್ಥಾಪಕ ಮೊಹಮ್ಮದ್ ಅಹ್ಮದ್ ಸಿದ್ದಿಬಾಪಾ ಅಲಿಯಾಸ್ ಯಾಸಿನ್ ಭಟ್ಕಳ್, ಪಾಕಿಸ್ತಾನಿ ಪ್ರಜೆ ಜಿಯಾ-ಉರ್-ರೆಹಮಾನ್ ಅಲಿಯಾಸ್ ವಕಾಸ್, ಅಸಾದುಲ್ಲಾ ಅಖ್ತರ್ ಅಲಿಯಾಸ್ ಮೊನ್ಜಾ ಹದ್ದಿ ಸೇರಿದಂತೆ ಐವರು ಸದಸ್ಯರನ್ನು ಎನ್‌ಐಎ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿತ್ತು.