ಬೆಂಗಳೂರು: ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿ ಸಾಯುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿ ಸಾಯುತ್ತೇನೆ. ನಾನು ಎಲ್ಲ ಧರ್ಮದ ಬಗ್ಗೆ ಗೌರವ ಇಟ್ಟಿದ್ದೇನೆ. ಜೈಲಿನಲ್ಲಿ ಇದ್ದಾಗ ಸಿಖ್ ಧರ್ಮದ ಬಗ್ಗೆ ಅಧ್ಯಯನ ಮಾಡಿದ್ದೆ.
ಇಸ್ಲಾಂ ಧರ್ಮದ ದರ್ಗಾಗೆ ಹಾಗೂ ಚರ್ಚ್ಗೂ ಹೋಗುತ್ತೇನೆ. ಕುಂಭ ಮೇಳದಲ್ಲಿ ನನಗೆ ಉತ್ತಮ ಅನುಭವ ಆಗಿದೆ. ತುಂಬಾ ಉತ್ತಮವಾಗಿ ನಿರ್ವಹಣೆ ಮಾಡಿದ್ದಾರೆ ಎಂದರು. ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ನಾನು ಇಶಾ ಫೌಂಡೇಶನ್ ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ. ಆದರೆ, ಇದಕ್ಕೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ.
ಇಶಾ ಫೌಂಡೇಶನ್ ಸಂಸ್ಥೆಯವರು ನಮ್ಮ ಮನೆಗೆ ಬಂದು ಆಹ್ವಾನ ನೀಡಿದ್ದಾರೆ. ನಾನು ಬರುವ ತನಕ ಕಾದು ಆಹ್ವಾನಿಸಿದ್ದಾರೆ. ಕಳೆದ ಬಾರಿ ನನ್ನ ಮಗಳು ಹೋಗಿದ್ದಳಂತೆ.
ಈ ಬಾರಿ ನಾನು ಹೋಗುತ್ತಿದ್ದೇನೆ. ನಾನು ಬಿಜೆಪಿಯವರ ಜೊತೆ ಯಾವುದೇ ಸಂಪರ್ಕ ಇಲ್ಲ. ಜಗ್ಗಿ ವಾಸುದೇವ್ ನಮ್ಮ ಮೈಸೂರಿನವರು. ನನ್ನ ಮನೆಗೆ ಬಂದು ಆಹ್ವಾನಿಸಿದ್ದಾರೆ. ನಾನು ಇವತ್ತು ಇಶಾ ಪೌಂಡೇಶನ್ ಕಾರ್ಯಕ್ರಮಕ್ಕೆ ಹೋಗುತ್ತೇನೆ. ಪಾಪ ನಾನು ಇನ್ನೂ ಅಮಿತ್ ಶಾರನ್ನ ಭೇಟಿಯನ್ನೇ ಮಾಡಿಲ್ಲ. ಆಗಲೇ ಸೋಷಿಯಲ್ ಮೀಡಿಯಾದಲ್ಲಿ ಬಿಜೆಪಿಗೆ ಹತ್ತಿರ ಅಂತ ವೈರಲ್ ಮಾಡುತ್ತಿದ್ದಾರೆ ಎಂದರು.