ಬೆಂಗಳೂರು:ಮ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ, ಸಿದ್ದರಾಮಯ್ಯ, ಡಿಕೆಶಿ ಮಾತ್ರ CM ಹುದ್ದೆಯ ಆಕಾಂಕ್ಷಿಗಳಲ್ಲ, ಪ್ರಚಾರ ಸಮಿತಿ ಅಧ್ಯಕ್ಷನಾಗಿರುವ ನಾನೂ ಕೂಡ ಸಿಎಂ ಹುದ್ದೆ ಆಕಾಂಕ್ಷಿ ಎಂದು ಎಂ.ಬಿ ಪಾಟೀಲ್ ಹೇಳಿದ್ದಾರೆ.
ಖರ್ಗೆ, ಸಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಪಾಲಿಗೆ ಉನ್ನತ ನಾಯಕರು. ಡಿಕೆಶಿ, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ ಮತ್ತು ನಾನು ಒಂದೇ ಸ್ಥಾನದಲ್ಲಿದ್ದೇವೆ ಎಂದು ಎಂ.ಬಿ ಪಾಟೀಲ್ ಹೇಳಿದ್ದು ಪಕ್ಷದಲ್ಲಿ ಹೊಸ ಸಂಚಲನ ಮೂಡಿಸಿದೆ.