ದೆಹಲಿ: ನಾನು ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ’ ಎಂದು ಸ್ಪಷ್ಟಪಡಿಸಿರುವ ಕುಸ್ತಿಪಟು ಸಾಕ್ಷಿ ಮಲಿಕ್, ‘ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ’ ಎಂದು ದೂರಿದ್ದಾರೆ.
“ನಮ್ಮಲ್ಲಿ ಯಾರೂ ಹಿಂದೆ ಸರಿಯುವುದಿಲ್ಲ. ಪ್ರತಿಭಟನೆಯ ಜತೆಗೆ ಕೆಲಸವನ್ನು ಮುಂದುವರಿಸುತ್ತೇವೆ. ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದಿದ್ದಾರೆ.
ಇಂತಹ ಸುಳ್ಳು ಸುದ್ದಿ ಹಬ್ಬಿಸಬೇಡಿ” ಎಂದು ಟ್ವೀಟ್ ಮಾಡಿದ್ದಾರೆ. ಏತನ್ಮಧ್ಯೆ, ಸಾಕ್ಷಿ ಹಾಗೂ ಪುನಿಯಾ ಕೂಡ ಪ್ರತಿಭಟನೆಯಿಂದ ಹಿಂದೆ ಸರಿದ್ದಾರೆ ಎಂದು ವರದಿಯಾಗಿದ್ದನ್ನ ಅಲ್ಲೆಗೆಳೆದಿದ್ದಾರೆ.!