ದಾವಣಗೆರೆ: ‘ಐ ಲವ್ ಮಹಮ್ಮದ್ʼ ಪ್ಲೆಕ್ಸ್ಗಳ ಹಾವಳಿ ರಾಜ್ಯಕ್ಕೂ ಕಾಲಿಟ್ಟಿದೆ. ಈ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆಯಾಗಿದ್ದು, ಮನೆಗಳ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಈ ಪೋಸ್ಟರ್ ಹಾಕಿದ ಕಿಡಿಗೇಡಿಗಳ ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಅನಗತ್ಯವಾಗಿ ಕೋಮು ದ್ವೇಷ ಪ್ರಚೋದಿಸುವ ಉದ್ದೇಶದಿಂದ ಈ ಫ್ಲೆಕ್ಸ್ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ದಾವಣಗೆರೆಯ ಬೇತೂರು ರಸ್ತೆಯ ಕಾರ್ಲ್ ಮಾರ್ಕ್ಸ್ ನಗರದ 13ನೇ ಕ್ರಾಸ್ನಲ್ಲಿ ಗಲಾಟೆಯಾಗಿದ್ದು, ನಾಲ್ವರಿಗೆ ಗಾಯಗಳಾಗಿವೆ ಎಂದು ಸ್ಥಳೀಯರು ಹೇಳಿದ್ದಾರೆ.
ಮನೆಯೊಂದರ ಮುಂದೆ ʼಐ ಲವ್ ಮೊಹಮ್ಮದ್ʼ ಎಂದು ಪ್ಲೆಕ್ಸ್ ಹಾಕಿದ್ದನ್ನು ಮನೆಯವರು ಪ್ರಶ್ನಿಸಿದ್ದಕ್ಕೆ ಗಲಾಟೆಯಾಗಿದೆ. ಫ್ಲೆಕ್ಸ್ಗೆ ಬ್ಲೇಡ್ ಹಾಕಿದ್ದಾರೆಂದು ಸುಳ್ಳು ಸುದ್ದಿ ಹಬ್ಬಿಸಿದ್ದು, ಒಂದು ಸಮುದಾಯದ 500-600 ಜನ ಬಂದು ಗಲಾಟೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾತಿನ ಚಕಮಕಿ ಆಗಿದ್ದು, ಬಳಿಕ ಮಾರಾಕಾರಿಯೂ ನಡೆದಿದೆ. ಗಾಯಾಳುಗಳು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾವಣಗೆರೆಯಲ್ಲೀಗ ಬಿಗುವಿನ ಸ್ಥಿತಿ ಇದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ‘ಐ ಲವ್ ಮೊಹಮ್ಮದ್’ ಭಿತ್ತಿಪತ್ರ ವಿವಾದವು ಉತ್ತರಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರಾಖಂಡ, ತೆಲಂಗಾಣ ಬಳಿಕ ಇದೀಗ ರಾಜ್ಯಕ್ಕೂ ಕಾಲಿಟ್ಟಿದೆ. ಬರೇಲಿಯಲ್ಲಿ ಉರುಸ್ ಯಾತ್ರೆ ವೇಳೆ ‘ಐ ಲವ್ ಮೊಹಮ್ಮದ್’ ಎಂಬ ಪೋಸ್ಟರ್ ಹಿಡಿದು ಮೆರವಣಿಗೆ ಸಾಗಿದ್ದರು. ಇದೀಗ ಟ್ರೆಂಡ್ ಆಗಿದ್ದು, ನಂತರ ಹಿಂದೂಗಳನ್ನು ಕೆರಳಿಸಲು ಕೆಲವು ಮುಸ್ಲಿಂ ಕಿಡಿಗೇಡಿಗಳು ಇದನ್ನು ಒಂದು ಅಭಿಯಾನವಾಗಿ ಶುರುಹಚ್ಚಿಕೊಂಡಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿ ಹಿಂದೂಗಳು ‘ಐ ಲವ್ ಮಹಾದೇವ್’ ಎಂಬ ಪೋಸ್ಟರ್ ಹಿಡಿದು ಪ್ರತಿಭಟನೆ ನಡೆಸಿದ್ದರು. ಬಳಿಕ ಈ ವಿವಾದ ಹಲವು ರಾಜ್ಯಗಳಿಗೆ ವ್ಯಾಪಿಸಿದೆ.