ಶ್ರೀನಗರ: ಭಾರತದ ಅತ್ಯಂತ ಕಠಿಣ ಪರೀಕ್ಷೆಯಲ್ಲಿ ಒಂದಾಗಿರುವ ಯುಪಿಎಸ್‌ಸಿಯಲ್ಲಿ ಉತ್ತೀರ್ಣರಾಗುವುದು ಕಷ್ಟಸಾಧ್ಯ. ಕೆಲವರು ಮೊದಲನೇ ಪ್ರಯತ್ನದಲ್ಲಿ ಉತ್ತೀರ್ಣರಾಗುತ್ತಾರೆ. ಆದರೆ ಕೆಲವರು ಎರಡು – ಮೂರು ಪ್ರಯತ್ನದ ಬಳಿಕ ಉತ್ತೀರ್ಣರಾಗುತ್ತಾರೆ. ಹೀಗೆ ತಮ್ಮ ಎರಡನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಥರ್ ಆಮೀರ್ ಖಾನ್ ಅವರ ಯಶೋಗಾಥೆ ಇದು.
ಆಥರ್ ಆಮೀರ್ ಖಾನ್ ಅವರು ಶ್ರೀನಗರದ ಟಿಂಡೇಲ್ ಬಿಸ್ಕೋ ಶಾಲೆಯಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು. ಅವರು ಐಐಟಿಯಿಂದ ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ ಬಿ.ಟೆಕ್ ಪದವಿ ಪಡೆದರು. ನಂತರ, ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ (ಜೆಎನ್‌ಯು) ಪಬ್ಲಿಕ್ ಮ್ಯಾನೇಜ್‌ಮೆಂಟ್ ವಿಷಯದಲ್ಲಿ ಎಂಎ ಅಧ್ಯಯನ ಮಾಡಿದರು.
2014ರಲ್ಲಿ ಮೊದಲ ಬಾರಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದ ಆಥರ್ ಅವರು ಉತ್ತೀರ್ಣರಾಗುವಲ್ಲಿ ವಿಫಲರಾಗುತ್ತಾರೆ. ಬಳಿಕ 2015ರಲ್ಲಿ ಎರಡನೇ ಬಾರಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದ ಅವರು 2ನೇ ರ‍್ಯಾಂಕ್ ಪಡೆದು ಉತ್ತೀರ್ಣರಾಗುತ್ತಾರೆ. ಈ ಮೂಲಕ ಅವರು ಐಎಎಸ್ ಅಧಿಕಾರಿಯಾಗುವಲ್ಲಿ ಯಶಸ್ವಿಯಾಗುತ್ತಾರೆ
ಆಥರ್ ಆಮೀರ್ ಖಾನ್, ಕುಲ್ಗಾಮ್ (ಜಮ್ಮು ಮತ್ತು ಕಾಶ್ಮೀರ) ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಅಭಿವೃದ್ಧಿ ಆಯುಕ್ತರಾಗಿದ್ದಾರೆ.

































