ಬೆಂಗಳೂರು : ಪಂಜಾಬಿನ ಪಟಿಯಾಲ ಬಳಿ ಕಾರು ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ICAT ಸಂಸ್ಥೆಯ ಏರ್ ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರಲಾಗಿದೆ.
ಕುರಬೂರು ಶಾಂತಕುಮಾರ್ ಹೊತ್ತ ಏರ್ ಆಂಬ್ಯುಲೆನ್ಸ್ ಹೆಚ್ ಎ ಎಲ್ ವಿಮಾನ ನಿಲ್ದಾಣ ಸುಮಾರ ಮಧ್ಯಾಹ್ನ 2:30ರ ಸುಮಾರಿಗೆ ಹೆಚ್ ಎ ಎಲ್ ತಲುಪಿದೆ. ಹೆಚ್ ಎ ಎಲ್ ನಿಂದ ಶಾಂತಕುಮಾರ್ ಅವ್ರನ್ನ ನೇರವಾಗಿ ಚಿಕಿತ್ಸೆಗಾಗಿ ಆಸ್ಪತ್ರಗೆ ದಾಖಲಿಸಲಾಗಿದೆ.
ಶಾಂತಕುಮಾರ್ ಅವರು ಪ್ರಯಾಣಿಸುತ್ತಿದ್ದ ಕಾರು ಪಟಿಯಾಲದ ಬಳಿ ಶುಕ್ರವಾರ ಅಪಘಾತಕ್ಕೀಡಾಗಿತ್ತು. ಘಟನೆಯಲ್ಲಿ ಶಾಂತಕುಮಾರ್ ಅವರ ಬೆನ್ನು ಮೂಳೆಗೆ ಗಂಭೀರ ಗಾಯಗಳಾಗಿದ್ದವು. ಅವರನ್ನು ಪಟಿಯಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುದ್ದಿ ತಿಳಿದ ಸಿಎಂ ಸಿದ್ದರಾಮಯ್ಯ ಅವರು ಶಾಂತಕುಮಾರ್‌ರನ್ನು ಏರ್ ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರಲು ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.