ಬೆಳಗಾವಿ: ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಹೊರ ವಲಯದಲ್ಲಿ ನಡೆದಿದೆ.
ಆರೋಪಿ ರಮೇಶ್ ಕಿಲ್ಲಾರ್ ಕಾಲಿಗೆ ಪೊಲೀಸರ ಗುಂಡು ಹಾರಿಸಿದ್ದಾರೆ. ದರೋಡೆ, ಸಾಮೂಹಿಕ ಅತ್ಯಾಚಾರ, ಅಕ್ರಮ ಶಸ್ತ್ರಾಸ್ತ್ರ ಸೇರಿ ಹಲವು ಪ್ರಕರಣದಲ್ಲಿ ಆರೋಪಿ ಆಗಿರುವ ರಮೇಶ್ ಕಿಲ್ಲಾರ್ ನನ್ನು ಪೊಲೀಸರು ಬಂಧಿಸಲು ಹೋಗಿದ್ದಾರೆ. ಈ ವೇಳೆ ಆರೋಪಿ ಪೊಲೀಸ್ ಪೇದೆ ಷರೀಫ್ ದಫೇದಾರ್ ಗೆ ಚಾಕು ಇರಿದು ಪರಾರಿಯಾಗಲು ಮುಂದಾಗಿದ್ದಾನೆ ಎನ್ನಲಾಗಿದೆ.
ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಪಿಎಸ್‌ಐ ಪ್ರವೀಣ್ ಗೊಂಗೊಳ್ಳಿ ಅವರು ಗುಂಡು ಹೊಡೆದಿದ್ದಾರೆ ಎಂದು ತಿಳಿದು ಬಂದಿದೆ. ಗಾಯಗೊಂಡ ಆರೋಪಿಯನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.