ಇಸ್ಲಾಮಾಬಾದ್ : ಅಗತ್ಯ ಬಿದ್ದರೆ ಮದರಸಾದ ಮಕ್ಕಳನ್ನು ಯುದ್ಧಕ್ಕೆ ಬಳಸಿಕೊಳ್ಳುತ್ತೇವೆ. ಅವರು ನಮ್ಮ ಎರಡನೇ ಹಂತದ ರಕ್ಷಣಾ ಪಡೆ ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ತಿಳಿಸಿದ್ದಾರೆ.
ಭಾರತದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಸಂಸತ್ತಿನ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಪಾಕ್ ರಕ್ಷಣಾ ಸಚಿವ ಆಸಿಫ್, ಮದರಸಾಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ದೇಶದ ಎರಡನೇ ಹಂತದ ರಕ್ಷಣಾ ಪಡೆ. ಅವರು ನಮ್ಮ ಎರಡನೇ ಹಂತದ ರಕ್ಷಣಾ ಸಿಬ್ಬಂದಿ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಅಲ್ಲಿ ಓದುತ್ತಿರುವ ಯುವಕರನ್ನು ಸಮಯ ಬಂದಾಗ ಅಗತ್ಯವಿರುವಂತೆ ಬಳಸಿಕೊಳ್ಳಲಾಗುವುದು ಎಂದು ಹೇಳಿದರು.
ನಾವು ಭಾರತದ ಡ್ರೋನ್ ದಾಳಿಯನ್ನು ತಡೆದಿಲ್ಲ. ನಮ್ಮ ಸ್ಥಳಗಳ ಬಗ್ಗೆ ಮಾಹಿತಿ ಸೋರಿಕೆಯಾಗಬಾರದು ಎಂಬ ಉದ್ದೇಶದಿಂದ ಹೀಗೆ ಮಾಡಿದೆವು. ನಿನ್ನೆ ಭಾರತವು ನಮ್ಮ ಸ್ಥಳಗಳನ್ನು ಪತ್ತೆಹಚ್ಚಲು ಡ್ರೋನ್ ದಾಳಿ ಮಾಡಿತು. ನಾನು ತಾಂತ್ರಿಕ ವಿಷಯಗಳನ್ನು ವಿವರಿಸಲು ಸಾಧ್ಯವಿಲ್ಲ ಎಂದಿದ್ದಾರೆ.