ಕಲಬುರುಗಿ: ಈಗಾಗಲೇ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿರುವ ಕಾಂಗ್ರೆಸ್, ಕಲಬುರಗಿಯಲ್ಲಿ ನಡೆದ ಸಮಾವೇಶದಲ್ಲಿಂದು ಮತ್ತೊಂದು ಮಹತ್ವದ ಘೋಷಣೆ ಮಾಡಿದೆ.
‘ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ 50 ಸಾವಿರ ಸರ್ಕಾರಿ ಹುದ್ದೆ ಭರ್ತಿ ಮಾಡುವುದಾಗಿ’ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಕಟಿಸಿದ್ದಾರೆ.
ಅಲ್ಲದೆ, ಪ್ರತಿ ಗ್ರಾಮ ಪಂಚಾಯಿತಿಗೆ ₹1 ಕೋಟಿ ನೀಡಲಾಗುವುದು ಮತ್ತು ಕಲ್ಯಾಣ ಕರ್ನಾಟಕಕ್ಕೆ ₹5,000 ಕೋಟಿ ನೀಡಲಾಗುವುದು’ ಎಂದೂ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.