ಬೆಳ್ಳುಳ್ಳಿ ಭಾರತೀಯ ಪಾಕಪದ್ಧತಿಯ ಮಸಾಲೆಯ ಒಂದು ಭಾಗವಾಗಿದೆ. ಇದನ್ನು ತರಕಾರಿ ಮತ್ತು ದಾಲ್ಗಳಿಗೆ ಸೇರಿಸಲಾಗುತ್ತದೆ.
ಕೆಲವರು ಬೆಳ್ಳುಳ್ಳಿ ಅಂದ್ರೆ ಸಾಕು, ಅದರ ವಾಸನೆಗೆ ಮೂಗು ಮುರೀತಾರೆ. ಆದರೆ ಬೆಳ್ಳುಳ್ಳಿ ಸೇವನೆಯಿಂದ ಅನೇಕ ಅಪಾಯಕಾರಿ ಕಾಯಿಲೆಗಳನ್ನು ಗುಣಪಡಿಸಬಹುದು ಎಂದು ವೈಜ್ಞಾನಿಕ ಅಧ್ಯಯನಗಳು ತೋರಿಸಿವೆ.
ಇದು ದೇಹದಲ್ಲಿ ಸಂಗ್ರಹವಾಗುವ ವಿಷವನ್ನು ತೆಗೆದುಹಾಕುವುದಲ್ಲದೆ ರಕ್ತವನ್ನು ಶುದ್ಧೀಕರಿಸಲು ಮತ್ತು ಖಿನ್ನತೆಯ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
ಹಾಗಾದರೆ ಬೆಳಗ್ಗೆದ್ದು ಬೆಳ್ಳುಳ್ಳಿ ತಿನ್ನೋದ್ರಿಂದ ಆರೋಗ್ಯಕ್ಕೆಷ್ಟು ಪ್ರಯೋಜನವಿದೆ ಗೊತ್ತಾ.?
ಬೆಳ್ಳುಳ್ಳಿ ಕೂದಲು ಉದುರುವುದನ್ನು ತಡೆಯುತ್ತದೆ ಮತ್ತು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ.
ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಅಲ್ಲದೇ ಬೆಳ್ಳುಳ್ಳಿ ದೇಹದ ಕೊಬ್ಬನ್ನು ಕರಗಿಸುತ್ತದೆ.
ಬೆಳ್ಳುಳ್ಳಿ ಜೀರ್ಣಕಾರಿ ರಸದ ಸ್ರವಿಸುವಿಕೆಯನ್ನು ಹೆಚ್ಚಿಸುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಅಲ್ಲದೇ ಅಜೀರ್ಣ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ.
ಬೆಳ್ಳುಳ್ಳಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಒಳ್ಳೆಯ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ. ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ.
ಬೆಳ್ಳುಳ್ಳಿಯಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ, ಆ್ಯಂಟಿ ಫಂಗಲ್ ಮತ್ತು ಆ್ಯಂಟಿ ವೈರಲ್ ಗುಣಗಳು ಹೇರಳವಾಗಿವೆ. ಶೀತ, ಕೆಮ್ಮು ಮತ್ತು ಜ್ವರದಂತಹ ರೋಗಗಳನ್ನು ತಡೆಯುವುದು.
ಬೆಳ್ಳುಳ್ಳಿಯಲ್ಲಿರುವ ಆಂಟಿಆಕ್ಸಿಡೆಂಟ್ಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ
ಉಸಿರಾಟ ಸಂಬಂಧಿ ಸಮಸ್ಯೆಗಳನ್ನು ತಡೆಯಲು ಬೆಳ್ಳುಳ್ಳಿ ಸಹಾಯ ಮಾಡುತ್ತದೆ.
ಬೆಳ್ಳುಳ್ಳಿಯಲ್ಲಿರುವ ಅಲಿಸಿನ್ ಎಂಬ ಸಂಯುಕ್ತವು ರಕ್ತನಾಳಗಳನ್ನು ಹಿಗ್ಗಿಸುತ್ತದೆ. ಇದರಿಂದ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.
ಬೆಳ್ಳುಳ್ಳಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಸುಕ್ಕುಗಳು ಮತ್ತು ಕಲೆಗಳಂತಹ ಸಮಸ್ಯೆಗಳಿಂದ ರಕ್ಷಿಸುತ್ತದೆ.
ಬೆಳ್ಳುಳ್ಳಿ ಮಧುಮೇಹಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.