ಚಿತ್ರದುರ್ಗ : ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ನ.29ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ಕೃಷಿಕರಿಗೆ ಸಾವಯವ ಕೃಷಿ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತರಬೇತಿ ಕಾರ್ಯಕ್ರಮದಲ್ಲಿ ತುಮಕೂರಿನ ನಿವೃತ್ತ ಕೃಷಿ ಅಧಿಕಾರಿ ಎಸ್.ರಾಜಶೇಖರಯ್ಯ ಅವರು ಸಾವಯವ ಕೃಷಿಯ ಅವಶ್ಯಕತೆ, ವಿವಿಧ ಸಾವಯವ ಪದ್ಧತಿಗಳು ಹಾಗೂ ಸಾವಯವ ಕೃಷಿಗೆ ಪೂರಕವಾದ ಜೀವಾಮೃತ, ಬೀಜಾಮೃತ, ಘನ ಜೀವಾಮೃತ ಮತ್ತು ವಿವಿಧ ಸಸ್ಯ ಜನ್ಯ ಕೀಟನಾಶಕಗಳ ತಯಾರಿಕೆ ಕುರಿತು ವಿಷಯ ಮಂಡನೆ ಮತ್ತು ಪ್ರಾತ್ಯಕ್ಷಿಕೆ ಮೂಲಕ ತೋರಿಸಿ ಕೊಡಲಿದ್ದಾರೆ.
ಆಸಕ್ತ 50 ಜನ ರೈತ ಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058ಗೆ ಕರೆ ಮಾಡಿ ತರಬೇತಿ ಸದುಪಯೋಗ ಪಡೆಯಬಹುದಾಗಿದೆ.
ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್‍ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿಯನ್ನು ತರಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.































