Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ರೈತರಿಗೆ ಮುಖ್ಯ ಮಾಹಿತಿ:  ಇ-ಕೆವೈಸಿ ಮಾಡಿಸಲು ಕೊನೆಯ ಅವಕಾಶ

0

 

ಚಿತ್ರದುರ್ಗ : ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ಫಲಾನುಭವಿಗಳಿಗೆ ಆರ್ಥಿಕ ನೆರವು ಜಮೆಯಾಗುತ್ತಿದ್ದು, ಈ ಕುರಿತು ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು. ಇದು ಕೊನೆಯ ಅವಕಾಶ ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಪಿ.ರಮೇಶ್ ಕುಮಾರ್ ಜಿಲ್ಲೆಯ ರೈತರಿಗೆ ಮನವಿ ಮಾಡಿದ್ದಾರೆ.

ಈಗಾಗಲೇ ಅನೇಕ ಬಾರಿ ಮನವಿ ಮಾಡಿದರೂ ಕೆಲವು ರೈತರು ಇ-ಕೆವೈಸಿ ಮಾಡಿಸಿರುವುದಿಲ್ಲ. ಅರ್ಹ ರೈತ ಫಲಾನುಭವಿಯು http://pmkisan.gov.in   ವೈಬ್ಸೈಟ್‍ಗೆ ಭೇಟಿ ನೀಡಿ, ಆಧಾರ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಬರುವ ಓಟಿಪಿ ನಮೂದಿಸಿ ಉಚಿತವಾಗಿ ಇ-ಕೆವೈಸಿ ಮಾಡಿಕೊಳ್ಳಬಹುದು.

ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್  ನೋಂದಾಣೆಯಾಗದ ರೈತರು ಅಥವಾ ಓಟಿಸಿ ಸೃಜನೆಯಾಗದ ರೈತರು ಹತ್ತಿರದ ಗ್ರಾಮ ಒನ್ ಸೇವಾ ಕೇಂದ್ರ ಅಥವಾ ಸಮಾನ್ಯ ಸೇವಾ ಕೇಂದ್ರಕ್ಕೆ (csc)  ಭೇಟಿ ನೀಡಿ ಬಯೋಮೆಟ್ರಿಕ್ ಉಪಕರಣದಲ್ಲಿ ಬೆರಳಚ್ಚು ನಮೂದಿಸಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಭೇಟಿ ನೀಡಿ, ಮಾಹಿತಿ ಪಡೆದು ಇ-ಕೆವೈಸಿ ನೋಂದಾಯಿಸಲು ಜಂಟಿ ಕೃಷಿ ನಿರ್ದೇಶಕ ಪಿ. ರಮೇಶಕುಮಾರ್ ತಿಳಿಸಿದ್ದಾರೆ.

Leave A Reply

Your email address will not be published.