ಬೆಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ ಮನೆ ದಾಖಲೆ ಪರಿಶೀಲನಾ ಕಾರ್ಯವು ಈಗಾಗಲೇ ಆರಂಭಗೊಂಡಿದೆ.
ಸೆಸ್ಕ್ ವ್ಯಾಪ್ತಿಯ ನೌಕರರು ಗ್ರಾಹಕರ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಪಡೆಯಲಿದ್ದಾರೆ. ಗೃಹಜ್ಯೋತಿ ಯೋಜನೆಯ ಅರ್ಹತೆ ಮರುಪರಿಶೀಲಿಸುವ ಉದ್ದೇಶದಿಂದ ಇಂಧನ ಇಲಾಖೆ ಈ ಮಹತ್ವದ ಕಾರ್ಯಕ್ಕೆ ಮುಂದಾಗಿದೆ.
ಗ್ರಾಹಕರ ಮೂಲ ದಾಖಲೆಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ ಬಳಿಕ ವಿಶೇಷ ಮೊಬೈಲ್ ಆಪ್ ಹಾಗೂ ಅಧಿಕೃತ ಘೋಷಣಾ ಪತ್ರದ ಮೂಲಕ ಹೊಸದಾಗಿ ಮಾಹಿತಿ ಸಂಗ್ರಹಿಸಿ ಅರ್ಜಿ ಭರ್ತಿ ಮಾಡುವ ಪ್ರಕ್ರಿಯೆಯನ್ನು ಸ್ಥಳದಲ್ಲಿಯೇ ಪೂರ್ಣಗೊಳಿಸುತ್ತಿದ್ದಾರೆ.
ಈ ಪ್ರಕ್ರಿಯೆಗೆ ಮೀಟರ್ ರೀಡರ್ ಮೂಲಕ ಸ್ಥಳದಲ್ಲಿಯೇ ತಪಾಸಣೆ ಮಾಡುವುದು ಏಕೈಕ ಮಾರ್ಗವಾಗಿದ್ದು, ಸಾರ್ವಜನಿಕರು ಸೆಸ್ಕ್ ಸಿಬ್ಬಂದಿಗೆ ಮಾಹಿತಿ ನೀಡುತ್ತಿದ್ದಾರೆ.
ಮನೆ ಮನೆಗೆ ಭೇಟಿ ಸಂದರ್ಭದಲ್ಲಿ ಫಲಾನುಭವಿಗಳು ಆಧಾರ್ ಕಾರ್ಡ್ ಇತ್ತೀಚಿನ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ ಪಾನ್ ಕಾರ್ಡ್, ರೇಷನ್ ಕಾರ್ಡ್, ಪಡಿತರ ಚೀಟಿ ಮತ್ತಿತರ ದಾಖಲೆಗಳನ್ನು ನೀಡಿ ಗೃಹಜ್ಯೋತಿ ಯೋಜನೆ ಪರಿಷ್ಕರಣಾ ಕಾರ್ಯಕ್ಕೆ ಕೈಜೋಡಿಸುವ ಕಾರ್ಯ ನಡೆದಿದೆ ಮುಂದಾಗಬೇಕು.!
































