ಬೆಳಗಾವಿ: ಅಧಿವೇಶನಕ್ಕೂ ಮೊದಲೇ ರಾಜ್ಯ ಸರ್ಕಾರ ರೈತರಿಗೆ ಗುಡ್ ನ್ಯೂಸ್ ನೀಡಿದೆ. ಪ್ರತಿ ರೈತರಿಂದ ಖರೀದಿಸುವ ಮೆಕ್ಕೆಜೋಳದ ಗರಿಷ್ಠ ಮಿತಿಯನ್ನು 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಹೆಚ್ಚಿಸಿದೆ.
ಪ್ರತಿ ಎಕರೆಗೆ 12 ಕ್ವಿಂಟಾಲ್ ಲೆಕ್ಕದಲ್ಲಿ ಗರಿಷ್ಠ 20 ಕ್ವಿಂಟಾಲ್ ಮೆಕ್ಕೆಜೋಳವನ್ನು ಮಾತ್ರ ಕ್ವಿಂಟಾಲ್‌ಗೆ ₹2400.00 ಬೆಂಬಲ ದರದಲ್ಲಿ ಖರೀದಿಸಲು DEC 2 ರಂದು ಹೊರಡಿಸಿದ್ದ ಆದೇಶಕ್ಕೆ ತಿದ್ದುಪಡಿ ಮಾಡಿ, ಇದೀಗ ಈ ಮಿತಿಯನ್ನು 50 ಕ್ವಿಂಟಾಲ್‌ಗೆ ಏರಿಕೆ ಮಾಡಿ ಸರ್ಕಾರ ಆದೇಶಿಸಿದೆ.

































