ದಾಂತೇವಾಡ : ಸುಧಾರಿತ ಕಚ್ಚಾ ಬಾಂಬ್ ಸ್ಫೋಟಿಸಿ (ಐಇಡಿ) ಕೇಂದ್ರಿಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್)ನ ಇಬ್ಬರು ಯೋಧರು ಗಾಯಗೊಂಡ ಘಟನೆ ಛತ್ತೀಸ್‌ಗಢದ ಸುಕ್ಕಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ಇಲ್ಲಿನ ಜಗರ್‌ಗುಂಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಅರೆಸೇನಾ ಪಡೆ ಶಿಬಿರದ ಸಮೀಪ, ಯೋಧರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಸ್ಫೋಟ ಸಂಭವಿಸಿದೆ. ಗಾಯಾಳುಗಳಿಗೆ ಪ್ರಾಥಮಿಕ ಹಂತದ ಚಿಕಿತ್ಸೆ ನೀಡಿದ ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಹೆಲಿಕಾಪ್ಟರ್ ಮೂಲಕ ರಾಯ್‌ಪುರಕ್ಕೆ ಕಳುಹಿಸಲಾಯಿತು ಎಂದು ದಂತೇವಾಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಸಿಆರ್‌ಪಿಎಫ್‌ನ 231ನೇ ಬೆಟಾಲಿಯನ್ ತಂಡವು ಹಿಂತಿರುಗುತ್ತಿದ್ದ ವೇಳೆ ಹೆಡ್ ಕಾನ್‌ಸ್ಟೆಬಲ್ ಎಂ.ಎನ್. ಶುಕ್ಲಾ ಅವರು ಐಇಡಿ ಮೇಲೆ ಕಾಲಿಟ್ಟ ವೇಳೆ ಒತ್ತಡಕ್ಕೆ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ.