ನವದೆಹಲಿ : ರಾಜ್ಯದ ಪಡಿತರ ಚೀಟಿದಾರರಿಗೆ ಅಕ್ಕಿ ಜೊತೆಗೆ ಸಕ್ಕರೆ, ಅಡುಗೆ ಎಣ್ಣೆ, ಬೇಳೆ, ಗೋಧಿ ನೀಡುವಂತೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.
ಹೌದು, ಪಡಿತರ ಚೀಟಿದಾರರಿಗೆ ಅಕ್ಕಿ ಜೊತೆಗೆ ಸಕ್ಕರೆ, ಅಡುಗೆ ಎಣ್ಣೆ, ಬೇಳೆ, ಗೋಧಿ ನೀಡುವಂತೆ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಕೇಂದ್ರ ಆಹಾರ ಸಚಿವರಾದ ಪ್ರಲ್ಹಾದ್ ಜೋಶಿ ಅವರಿಗೆ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿ, ಕರ್ನಾಟಕದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (NFSA) ಅಡಿಯಲ್ಲಿ ಅಕ್ಕಿಯೊಂದಿಗೆ ಎಣ್ಣೆ ಹಾಗೂ ಬೇಳೆ ವಿತರಣೆ ಮಾಡಲು ಕ್ರಮ ವಹಿಸುವಂತೆ ಮನವಿ ಸಲ್ಲಿಸಿದ್ದಾರೆ.