ಬೆಂಗಳೂರು : ಮಹಿಳೆಯನ್ನ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಪರಾರಿ ಆಗಿರುವ ಘಟನೆ ನಗರದ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದೆ. ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣ ದಾಖಲಿಸಲಾಗಿದೆ.
ನಿನ್ನೆ ತಡರಾತ್ರಿ ಆಟೋದಲ್ಲಿ ಮಹಿಳೆ ಶವ ತಂದಿದ್ದ ದುಷ್ಕರ್ಮಿಗಳು, ಮೈದಾನದ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿಟ್ಟು ಪರಾರಿ ಆಗಿದ್ದಾರೆ ಎಂದು ಹೇಳಲಾಗಿದೆ. ಪೊಲೀಸರಿಂದ ತನಿಖೆ ನಡೆದಿದ್ದು, 30 ರಿಂದ 35 ವರ್ಷದ ಮಹಿಳೆ ಎಂದು ಹೇಳಲಾಗಿದೆ. ಅಪರಿಚಿತ ಮಹಿಳೆ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸದ್ಯ ಆರೋಪಿಗಳ ಪತ್ತೆಗಾಗಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.