ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಸರಳಗೊಂಡಿದ್ದು, ಒಂದೇ ದಿನ 20 ಲಕ್ಷ ಮಂದಿ ನೋಂದಾಯಿಸಿಕೊಂಡಿದ್ದಾರೆ.
ಅರ್ಜಿ ಸಲ್ಲಿಸಿದ ಮಾತ್ರಕ್ಕೆ ನಿಮ್ಮ ಖಾತೆಗೆ ಹಣ ಜಮೆಯಾಗಲ್ಲ. ಅದಕ್ಕಾಗಿ ಮನೆಯ ಯಜಮಾನಿಯರು ಆಧಾರ್ ಕಾರ್ಡ್ ಅನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕು.
ಇದಕ್ಕಾಗಿ ನೀವು ಬ್ಯಾಂಕ್ ಶಾಖೆಗೆ ಹೋಗಿ ಆಧಾರ್ ಸೀಡಿಂಗ್‌ಗೆ ಅರ್ಜಿ ಸಲ್ಲಿಸಬೇಕು ಮತ್ತು NPCI ಮ್ಯಾಪಿಂಗ್ ಮಾಡಿಸಬೇಕು. ಹೀಗೆ ಮಾಡಿದ್ರೆ ಮಾತ್ರ ಖಾತೆಗೆ ಹಣ ಜಮೆಯಾಗುತ್ತದೆ.