ಭಾರತೀಯ ರೈಲ್ವೆ ಇಲಾಖೆ ಸಹಾಯಕ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಒಟ್ಟು 9,970 ಹುದ್ದೆಗಳು ಖಾಲಿ ಇದ್ದು ಆಸಕ್ತರು ಇಂದು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರ ವಯೋಮಿತಿ 18 ವರ್ಷದಿಂದ 30 ವರ್ಷದ ಒಳಗೆ ಇರಬೇಕು ಎನ್ನಲಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಆಸಕ್ತರು ರೈಲ್ವೆ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.