ನವದೆಹಲಿ : ರಾಷ್ಟ್ರ ರಾಜಧಾನಿಯ ಕೋಟ್ಲಾ ರಸ್ತೆಯ 9ಎನಲ್ಲಿ ನಿರ್ಮಾಣಗೊಂಡ ಪಕ್ಷದ ಮುಖ್ಯ ಕಚೇರಿಯನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಜ.15ರಂದು ಉದ್ಘಾಟಿಸಿದರು.
ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್ ಮತ್ತು ಪಕ್ಷದ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.