Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ಬಿಇಡಿ, ಡಿಇಡಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ: ಅರ್ಜಿ ಆಹ್ವಾನ

0

 

ಹೊಸಪೇಟೆ: 2023-24ನೇ ಸಾಲಿನಲ್ಲಿ ಬಿಇಡಿ ಮತ್ತು ಡಿಇಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗುಂಡಪ್ಪ ಜಾಗಲಿಗೊಪ್ಪ ಅವರು ತಿಳಿಸಿದ್ದಾರೆ.

ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ಖ ಮತ್ತು ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್  https://sevasindu.karnataka.gov.in    ಮೂಲಕ ಸೆ.21ರೊಳಗಾಗಿ ಅರ್ಜಿ ಸಲ್ಲಿಸಿ, ಅಗತ್ಯ ದಾಖಲಾತಿಯೊಂದಿಗೆ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿರುವ ಕಾಲೇಜು ಇರುವ ತಾಲ್ಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಸಲ್ಲಿಸಬೇಕು.

ತಾಲ್ಲೂಕುವಾರು ಮಾಹಿತಿ ಕೇಂದ್ರದ ವಿವರ:

ಜಿಲ್ಲಾ ಕೇಂದ್ರ ಹೊಸಪೇಟೆಯ ವಿಜಯನಗರ ಕಾಲೇಜು ರಸ್ತೆಯ ಪರ್ವೇಜ್ ಪ್ಲಾಜ ಬಿಲ್ಡಿಂಗ್ ನೆಲಮಹಡಿ-1 ರಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೊ:8050435366, ಕೂಡ್ಲಿಗಿ ತಾಲ್ಲೂಕು ಪಂಚಾಯತಿ ಆವರಣದಲ್ಲಿ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೊ:9060330060, ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಬೈಪಾಸ್ ರಸ್ತೆ ಜಾಲಿ ನಗರದಲ್ಲಿರುವ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೊ:9980237242, ಹೂವಿನಹಡಗಲಿ ತಾಲ್ಲೂಕಿನ ಇಂಡಿಯನ್ ಗ್ಯಾಸ್ ಆಫೀಸ್ ಹಿಂಭಾಗ ವಿಜಯನಗರ ಬಡಾವಣೆಯಲ್ಲಿರುವ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೊ:7353696984, ಹರಪನಹಳ್ಳಿ ಮತ್ತು ಕೊಟ್ಟೂರು ತಾಲ್ಲೂಕು ಪಂಚಾಯತಿ ಆವರಣದಲ್ಲಿರುವ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೊ:8494927891 ಸಂಖ್ಯೆಗೆ ಸಂಪರ್ಕಿಸಬಹುದು.

ಅಭ್ಯರ್ಥಿಯು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು, ಅಭ್ಯರ್ಥಿಯು ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್ಖ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು, ಅಭ್ಯರ್ಥಿ ಪೋಷಕರ ವಾರ್ಷಿಕ ಆದಾಯ ಗರಿಷ್ಠ ರೂ.6.00 ಲಕ್ಷ ಮೀರಿರಬಾರದು, ವಿದ್ಯಾರ್ಥಿಗಳು ಬಿಇಡಿ ಹಾಗೂ ಡಿಇಡಿ ಕೋರ್ಸ್ಗಳಲ್ಲಿ ದಾಖಲಾಗಿರುವ ಹಾಗೂ ಶುಲ್ಕವನ್ನು ಭರಿಸಿರುವ ಬಗ್ಗೆ ಎಲ್ಲಾ ಅಧಿಕೃತ ದಾಖಲಾತಿಗಳನ್ನು ಸಲ್ಲಿಸಬೇಕು ಹಾಗೂ ಅಭ್ಯರ್ಥಿಗಳು ಹಿಂದಿನ ಸಾಲಿನಲ್ಲಿ ಕನಿಷ್ಠ ಶೇ.50% ರಷ್ಟು ಅಂಕ ಪಡೆದು ಉತ್ತೀರ್ಣರಾಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆ ನಗರದ ಜಂಬುನಾಥ ರಸ್ತೆ, 24ನೇ ವಾರ್ಡ್ನ ಶ್ರೀ ಬೀರಲಿಂಗೇಶ್ವರ ನಗರದಲ್ಲಿರುವ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹೆಲ್ಪ್ಲೈನ್ ನಂ:8277799990 (24/7) ಸಂಪರ್ಕಿಸಬಹುದಾಗಿದೆ.

Leave A Reply

Your email address will not be published.