ನವದೆಹಲಿ : ಪಾಕಿಸ್ತಾನ ಧ್ವಜ ಹೊಂದಿರುವ ಹಡಗುಗಳು ಭಾರತೀಯ ಬಂದರುಗಳಿಗೆ ಪ್ರವೇಶಿಸುವುದಕ್ಕೆ ಹಾಗೂ ಭಾರತೀಯ ಧ್ವಜ ಹೊಂದಿರುವ ಹಡಗುಗಳು ಪಾಕಿಸ್ತಾನದ ಬಂದರುಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಲಾಗಿದ್ದು, ಈ ಮೂಲಕ ಪಾಕ್ಗೆ ಹೋಗುವ ಮತ್ತು ಬರುವ ಹಡಗುಗಳಿಗೆ ಭಾರತ ಬ್ರೇಕ್ ಹಾಕಿದೆ.
ಭಾರತೀಯ ಆಸ್ತಿಗಳು, ಸರಕು ಮತ್ತು ಬಂದರು ಮೂಲಸೌಕರ್ಯಗಳನ್ನು ರಕ್ಷಿಸಲು 1958 ರ ಮರ್ಚೆಂಟ್ ಶಿಪ್ಪಿಂಗ್ ಕಾಯ್ದೆಯ ಸೆಕ್ಷನ್ 411 ರ ಅಡಿಯಲ್ಲಿ ತಕ್ಷಣದಿಂದ ಜಾರಿಗೆ ಬರುವ ಈ ನಿರ್ಬಂಧಗಳನ್ನು ವಿಧಿಸಲಾಗಿದೆ ರಾಷ್ಟ್ರೀಯ ಹಿತಾಸಕ್ತಿಗಳನ್ನು ಪೂರೈಸಲು ಸೂಕ್ತವಾದ ರೀತಿಯಲ್ಲಿ, ಅಭಿವೃದ್ಧಿಯನ್ನು ಉತ್ತೇಜಿಸುವುದು ಮತ್ತು ಭಾರತೀಯ ವಾಣಿಜ್ಯ ನೌಕಾಪಡೆಯ ಪರಿಣಾಮಕಾರಿ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳುವುದು ಈ ಕಾಯಿದೆಯ ಉದ್ದೇಶವಾಗಿದೆ ಎಂದು ಬಂದರುಗಳು, ಹಡಗು ಸಾಗಣೆ ಮತ್ತು ಜಲಮಾರ್ಗಗಳ ಸಚಿವಾಲಯ ಆದೇಶ ಹೊರಡಿದೆ.
ಪಾಕಿಸ್ತಾನದ ಧ್ವಜವನ್ನು ಹೊಂದಿರುವ ಹಡಗು ಯಾವುದೇ ಭಾರತೀಯ ಬಂದರಿಗೆ ಪ್ರವೇಶಿಸುವಂತಿಲ್ಲ. ಹಾಗೆಯೇ, ಭಾರತೀಯ ಧ್ವಜವನ್ನು ಹೊಂದಿರುವ ಹಡಗು ಪಾಕಿಸ್ತಾನದ ಯಾವುದೇ ಬಂದರುಗಳಿಗೆ ಹೋಗುವಂತಿಲ್ಲ ಎಂದು ಆದೇಶಿಸಲಾಗಿದೆ. ಭದ್ರತೆಯನ್ನು ಬಲಪಡಿಸುವ ಮತ್ತು ಭಾರತದ ಕಡಲ ಹಿತಾಸಕ್ತಿಗಳ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳುವ ಪ್ರಯತ್ನಗಳ ಭಾಗವಾಗಿ, ಮುಂದಿನ ಸೂಚನೆ ಬರುವವರೆಗೂ ಈ ಆದೇಶ ಜಾರಿಯಲ್ಲಿರುತ್ತದೆ.