ಇಸ್ಲಾಮಾಬಾದ್ : ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಭಾರತ ಯಾವುದೇ ಸಮಯದಲ್ಲಿ ಬೇಕಾದರೂ ದಾಳಿ ನಡೆಸಬಹುದು ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸಿಫ್ ತಿಳಿಸಿದ್ದಾರೆ.
ಪಹಲ್ಗಾಮ್ ಉಗ್ರರ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ನಡುವೆ ಎಲ್‌ಒಸಿಯಲ್ಲಿ ಭಾರತ ಯಾವುದೇ ಸ್ಥಳದ ಮೇಲೆ ದಾಳಿ ಮಾಡಬಹುದು ಎಂಬ ವರದಿಗಳಿವೆ. ಸೂಕ್ತ ಪ್ರತ್ಯುತ್ತರ ನೀಡಲಾಗುವುದು, ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿದ ಅವರು, ರಾಜಕೀಯ ಲಾಭಕ್ಕಾಗಿ ಈ ಪ್ರದೇಶವನ್ನು ಯುದ್ಧದ ಅಂಚಿಗೆ ತಳ್ಳುತ್ತಿದ್ದಾರೆ ಎಂದು ಅವರು ಈ ಹೇಳಿಕೆ ನೀಡಿದ್ದಾರೆ.
ಪಹಲ್ಗಾಮ್ ದಾಳಿಯ ಬಗ್ಗೆ ಅಂತರರಾಷ್ಟ್ರೀಯ ತನಿಖೆಗೆ ಪಾಕ್ ಪ್ರಧಾನಿ ಶಹಬಾಜ್ ಷರೀಫ್ ಒತ್ತಾಯಿಸಿದ್ದಾರೆ. ತಹ ತನಿಖೆಯಿಂದ ಭಾರತವೇ ಈ ದಾಳಿಯಲ್ಲಿ ಭಾಗಿಯಾಗಿದೆಯೇ ಅಥವಾ ಯಾವುದಾದರೂ ಆಂತರಿಕ ಗುಂಪು ಭಾಗಿಯಾಗಿದೆಯೇ ಎಂಬುದು ಸ್ಪಷ್ಟವಾಗುತ್ತದೆ, ಆಧಾರರಹಿತ ಆರೋಪಗಳ ಹಿಂದಿನ ಸತ್ಯವನ್ನು ಬಹಿರಂಗಪಡಿಸುತ್ತದೆ ಎಂದು ಹೇಳಿದ್ದಾರೆ.