ಭಾರತ ಏಕದಿನ ತಂಡಕ್ಕೆ ಹೊಸ ನಾಯಕನ ಆಯ್ಕೆ?

WhatsApp
Telegram
Facebook
Twitter
LinkedIn

ಮುಂಬೈ :ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮುಕ್ತಾಯದ ಬೆನ್ನಲ್ಲೇ ಭಾರತ ಏಕದಿನ ತಂಡಕ್ಕೆ ಹೊಸ ನಾಯಕನ್ನು ಆಯ್ಕೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಪ್ರಸ್ತುತ ಏಕದಿನ ತಂಡದ ನಾಯಕರಾಗಿರುವ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಿದ್ದು, ಅವರ ಬದಲಿಗೆ ಯುವ ಆಟಗಾರನಿಗೆ ಕ್ಯಾಪ್ಟನ್ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

39 ವರ್ಷದ ರೋಹಿತ್ ಶರ್ಮಾ ಈಗಾಗಲೇ ಟಿ20 ಹಾಗೂ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇನ್ನುಳಿದಿರುವುದು ಏಕದಿನ ಕ್ರಿಕೆಟ್​ನಲ್ಲಿ ಮಾತ್ರ. ಆದರೆ ಚಾಂಪಿಯನ್ಸ್ ಟ್ರೋಫಿ ಮುಕ್ತಾಯದ ಬೆನ್ನಲ್ಲೇ ನಿವೃತ್ತಿ ಘೋಷಿಸಲು ಹಿಟ್​ಮ್ಯಾನ್​ಗೆ ಬಿಸಿಸಿಐ ಸೂಚಿಸಿದ್ದರು ಎನ್ನಲಾಗಿದೆ. ಇದಾಗ್ಯೂ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್​ನಲ್ಲಿ ಮುಂದುವರೆಯಲು ಬಯಸಿದ್ದಾರೆ. ಅಲ್ಲದೆ 2027ರ ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಗುರಿಯನ್ನು ಹೊಂದಿದ್ದಾರೆ.

ಆದರೆ ಅಷ್ಟರಲ್ಲಿ ರೋಹಿತ್ ಶರ್ಮಾ ಅವರ ವಯಸ್ಸು 40 ದಾಟಲಿದೆ. ಅಷ್ಟೇ ಅಲ್ಲದೆ ಅಲ್ಲಿಯವರೆಗೆ ಅವರು ಫಿಟ್​ ಆಗಿರಲಿದ್ದಾರೆ ಅಥವಾ ಫಾರ್ಮ್ ಉಳಿಸಿಕೊಳ್ಳಲಿದ್ದಾರಾ ಎಂಬುದರ ಬಗ್ಗೆ ಯಾವುದೇ ಖಚಿತತೆ ಇಲ್ಲ. ಹೀಗಾಗಿ ಮುಂಬರುವ ಸರಣಿಗೂ ಮುನ್ನ ಭಾರತ ಏಕದಿನ ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಲು ಬಿಸಿಸಿಐ ಚಿಂತಿಸಿದೆ.

ಭಾರತ ತಂಡದ ಮುಂದಿನ ಏಕದಿನ ಸರಣಿಯು ಆಗಸ್ಟ್ 17 ರಿಂದ ಶುರುವಾಗಲಿದೆ.

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon