ಲಂಡನ್ : ಇತ್ತೀಚೆಗೆ ಪಾಕಿಸ್ತಾನ ತನ್ನ ದೇಶದ ಮೇಲೆಯೇ ನಡೆಸಿದ ವಾಯುದಾಳಿಯಲ್ಲಿ 30 ಮಂದಿ ನಾಗರಿಕರು ಬಲಿಯಾಗಿರುವ ಘಟನೆಯ ವಿರುದ್ಧ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ ಸಭೆಯಲ್ಲಿ ಪಾಕಿಸ್ತಾನವನ್ನು ಭಾರತ ತರಾಟೆಗೆ ತೆಗೆದುಕೊಂಡಿದೆ.
ಜಾಗತಿಕವಾಗಿ ಅಸ್ಥಿರತೆ ಉಂಟುಮಾಡಲು ಭಯೋತ್ಪಾದನೆ ರಫ್ತು ಮಾಡುತ್ತದೆ. ಈಗ ನೋಡಿದ್ರೆ ತನ್ನ ಸ್ವಂತ ನಾಗರಿಕರ ಮೇಲೆಯೇ ಬಾಂಬ್ ದಾಳಿ ಮಾಡಿದೆ. ಭಯೋತ್ಪಾದನೆಯ ಪ್ರಚಾರಕ್ಕಾಗಿ ಅಂತಾರಾಷ್ಟ್ರೀಯ ವೇದಿಕೆಗಳನ್ನ ದುರುಪಯೋಗಪಡಿಸಿಕೊಂಡಿದೆ. ಎಂದು UNHRCಯಲ್ಲಿನ ಭಾರತೀಯ ಪ್ರತಿನಿಧಿ ಕ್ಷಿತಿಜ್ ತ್ಯಾಗಿ ವಾಗ್ದಾಳಿ ನಡೆಸಿದ್ದಾರೆ.
ಸೋಮವಾರ ಬೆಳಗ್ಗಿನ ಜಾವ ಜೆಎಫ್ -17 ಪಾಕಿಸ್ತಾನಿ ಯುದ್ಧ ವಿಮಾನಗಳು ತನ್ನ ಮಾಟ್ರೆ ದಾರಾ ಗ್ರಾಮದ ಮೇಲೆ 8 SL-6 ಬಾಂಬ್ಗಳ ಮೂಲಕ ವಾಯುದಾಳಿ ನಡೆಸಿದೆ. ಆ ದಾಳಿಯಲ್ಲಿ ಮಹಿಳೆಯರು ಮಕ್ಕಳು ಸೇರಿ 30 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿದರು.
“ನಮ್ಮ ಪ್ರದೇಶವನ್ನು ಅಪೇಕ್ಷಿಸುವ ಬದಲು, ಪಾಕಿಸ್ತಾನ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಭಾರತೀಯ ಪ್ರದೇಶವನ್ನು ಖಾಲಿ ಮಾಡಬೇಕು ಎಂದರಲ್ಲದೇ ಭಯೋತ್ಪಾದನೆ ರಫ್ತು ಮಾಡುವುದರಿಂದ, ತಮ್ಮದೇ ಜನರ ಮೇಲೆ ಬಾಂಬ್ ದಾಳಿ ಮಾಡುವುದರಿಂದ, ವಿಶ್ವಸಂಸ್ಥೆ ಗುರುತಿಸಿದ ಉಗ್ರರಿಗೆ ಆಶ್ರಯ ನೀಡುವುದರಿಂದ ಸಮಯ ಸಿಕ್ಕರೆ ಜೀವ ಬೆಂಬಲದ ಮೇಲೆ ಆರ್ಥಿಕತೆ ಸುಧಾರಿಸುವತ್ತ ಗಮನಹರಿಸಬೇಕು. ಆದ್ರೆ ಪಾಕಿಸ್ತಾನಕ್ಕೆ ಸಮಯ ಸಿಕ್ಕರೆ ತನ್ನದೇ ದೇಶದ ನಾಗರಿಕೆ ಮೇಲೆ ದಾಳಿ ಮಾಡುವ ಕೆಲಸವನ್ನು ಮಾಡುತ್ತಿದೆ” ಎಂದು ಕಿಡಿಕಾರಿದರು.