ನವದೆಹಲಿ: ಪಾಕಿಸ್ತಾನವು ಪ್ರತೀಕಾರವಾಗಿ ಭಾರತೀಯ ಸೇನಾ ನೆಲೆಯ ಮೇಲೆ ದಾಳಿ ನಡೆಸಲು ಯತ್ನಿಸಿದೆ. ಆದರೆ ಭಾರತ, ಪಾಕ್ ಡ್ರೋನ್‌ಗಳನ್ನು ಧ್ವಂಸಗೊಳಿಸಿದೆ.
ಜಮ್ಮು ವಾಯುನೆಲೆ, ಜೈಸಲ್ಮೇರ್, ಪಠಾಣ್‌ಕೋಟ್, ಅಖ್ನೂರ್, ರಾಜೌರಿ,ಪೂಂಚ್, ತಂಗಹಾರ್, ಸೇರಿದಂತೆ ಗಡಿ ಸಮೀಪದ ಹಲವಾರು ಪ್ರದೇಶಗಳ ಮೇಲೆ ಪಾಕಿಸ್ತಾನ ಡ್ರೋನ್ ದಾಳಿಗೆ ಯತ್ನಿಸಿದೆ. ಆದ್ರೆ, ಭಾರತೀಯ ಸೇನೆ ವಿಫಲಗೊಳಿಸಿದೆ.
ಪಾಕಿಸ್ತಾನದ ಫೈಟರ್ ಜೆಟ್ ಎಫ್-16 ಅನ್ನು ಭಾರತೀಯ ಸೇನಾಪಡೆ ಧ್ವಂಸಗೊಳಿಸಿದೆ. ಅಲ್ಲದೇ ಒಬ್ಬ ಪಾಕ್ ಪೈಲೆಟ್‌ನ್ನು ಜೀವಂತ ಸೆರೆ ಹಿಡಿಯಲಾಗಿದೆ. ಪಾಕ್‌ನ ಎಫ್-16 ಫೈಟರ್ ಜೆಟ್ ಕೆಳಕ್ಕೆ ಬೀಳುತ್ತಿದ್ದಂತೆ ಅದರ ಪೈಲೆಟ್ ಪ್ಯಾರಚೂಟ್ ಮೂಲಕ ಭಾರತದ ಭೂಪ್ರದೇಶದಲ್ಲಿ ಕೆಳಗಿಳಿದ ಆತನನ್ನು ನಮ್ಮ ಸೇನೆ ವಶಕ್ಕೆ ಪಡೆದುಕೊಂಡಿದೆ.
ಪ್ರಮುಖವಾಗಿ ಚನಿ ಹಿಮತ್, ಆರ್‌ಎಸ್ ಪುರ, ಜಮ್ಮುವಿನ 3 ಕಡೆಯಲ್ಲಿ ಪಾಕಿಸ್ತಾನ ಡ್ರೋನ್ ದಾಳಿಗೆ ಯತ್ನ ಮಾಡಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್‌ನಿಂದ ಗುಂಡಿನ ದಾಳಿ ಕೂಡ ಮುಂದುವರಿದಿದೆ. ಜಮ್ಮು ವಿಮಾನ ನಿಲ್ದಾಣದ ಮೇಲೆ ದಾಳಿ ಮಾಡಲು ಪಾಕ್ ವಿಫಲ ಪ್ರಯತ್ನ ನಡೆಸಿದ್ದು, ಎಸ್ -400 ಹಲವಾರು ಪಾಕ್ ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಪಾಕ್‌ನಿಂದ ಕಳುಹಿಸಲಾದ ಕ್ಷಿಪಣಿ, ಡ್ರೋನ್‌ಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ. ಇನ್ನು ಪಾಕಿಸ್ತಾನದ 1 ಎಫ್-16, 2 ಜೆಎಫ್-17 ಫೈಟರ್ ಜೆಟ್‌ಗಳನ್ನು ಧ್ವಂಸ ಮಾಡಿದೆ. ಈ ಘಟನೆಯಿಂದ ಜಮ್ಮುವಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.