ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿಯಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆಯು ಆಪರೇಷನ್ ಶಿವಶಕ್ತಿ ಕಾರ್ಯಾಚರಣೆಯ ಮೂಲಕ ಹೊಡೆದುರುಳಿಸಿದೆ.
ಇಬ್ಬರು ಉಗ್ರರು ಕಾಶ್ಮೀರದ ಪೂಂಚ್ ಸೆಕ್ಟರ್ ಬಳಿ ಗಡಿ ನಿಯಂತ್ರಣ ರೇಖೆ ಬಳಿಯಲ್ಲಿ ದೇಶದ ಒಳನುಗ್ಗಲು ಯತ್ನಿಸುತ್ತಿದ್ದ ವೇಳೆ ಭಾರತೀಯ ಸೇನೆಯು ಉಗ್ರರನ್ನು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದೆ.
ಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರತೀಯ ಸೇನೆ ಗಡಿಯುದ್ದಕ್ಕೂ ಆಪರೇಷನ್ ಶಿವಶಕ್ತಿ ಕಾರ್ಯಾಚರಣೆಯನ್ನು ನುಸುಳುಕೋರರನ್ನು ತಡೆಯುವ ನಿಟ್ಟಿನಲ್ಲಿ ಕೈಗೊಂಡಿದ್ದು, ಸೇನೆಯ 16 ಕಾರ್ಪ್ಸ್ ತುಕಡಿ ಈ ಕಾರ್ಯಾಚರಣೆ ನಡೆಸಿದೆ.
ಎನ್‌ಕೌಂಟರ್‌ನಲ್ಲಿ ಬಲಿಯಾದ ಉಗ್ರರ ಬಳಿ ಮೂರು ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ.