ನವದೆಹಲಿ :ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕುವೈತ್ಗೆ ಎರಡು ದಿನಗಳ ಭೇಟಿ ನೀಡಲಿದ್ದಾರೆ. 43 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಕುವೈತ್ಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಪ್ರಧಾನಿಯವರ ಐತಿಹಾಸಿಕ ಭೇಟಿಯು ಭಾರತ-ಕುವೈತ್ ದ್ವಿಪಕ್ಷೀಯ ಸಂಬಂಧಗಳಲ್ಲಿ ಹೊಸ ಅಧ್ಯಾಯವನ್ನು ತೆರೆಯುವ ನಿರೀಕ್ಷೆಯಿದೆ.
ಪ್ರಧಾನಿ ಮೋದಿ ಅವರು ಕುವೈತ್ನ ಉನ್ನತ ನಾಯಕತ್ವದೊಂದಿಗೆ ಮಾತುಕತೆ ನಡೆಸಲಿದ್ದಾರೆ. ಭಾರತೀಯ ಕಾರ್ಮಿಕ ಶಿಬಿರಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಗಲ್ಫ್ ಕಪ್ ಫುಟ್ಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಕುವೈತ್ನಲ್ಲಿ ನೆಲೆಸಿರುವ ಭಾರತೀಯ ಸಮುದಾಯದ ಜನರನ್ನು ಪ್ರಧಾನಿ ಮೋದಿ ಭೇಟಿ ಮಾಡಲಿದ್ದಾರೆ. ಪ್ರಧಾನಿ ಸ್ವಾಗತಕ್ಕೆ ಕುವೈತ್ನಲ್ಲಿ ಭರದ ಸಿದ್ಧತೆ ನಡೆಸಲಾಗಿದೆ. ಭಾರತೀಯ ಸಮುದಾಯದ ಜನರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ಉತ್ಸುಕರಾಗಿದ್ದಾರೆ.