ಭಾರತೀಯ ರೈಲ್ವೆಯ ವಾಯುವ್ಯ ರೈಲ್ವೆ ಇಲಾಖೆಯಲ್ಲಿ ಒಟ್ಟು 898 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
10ನೇ ತರಗತಿಯಲ್ಲಿ ಕನಿಷ್ಠ ಶೇ. 50 ಅಂಕಗಳೊಂದಿಗೆ ಉತ್ತೀರ್ಣರಾಗಿ ಜೊತೆಗೆ ಎನ್ ಸಿವಿಟಿ ಅಥವಾ ಎಸ್‌ಸಿವಿಟಿ ಮಾನ್ಯತೆ ಪಡೆದ ಐಟಿಐ ಪ್ರಮಾಣಪತ್ರ ಹೊಂದಿರಬೇಕು.
ವಯಸ್ಸಿನ ಮಿತಿ ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷವಾಗಿದ್ದು ಗರಿಷ್ಠ ವಯೋಮಿತಿಯಲ್ಲಿ ಎಸ್ ಸಿ/ ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ.
rrcjaipur.in ಅಥವಾ nwr.indian.railways.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು ಸಾಮಾನ್ಯ ಅಭ್ಯರ್ಥಿಗಳಿಗೆ 100 ರೂ. ಎಸ್ ಸಿ/ ಎಸ್ ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
10ನೇ ಮತ್ತು ಐಟಿಐ ನಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಮೆರಿಟ್ ಪಟ್ಟಿ ಸಿದ್ಧಪಡಿಸಿ ಆಯಾಯ ಟ್ರೇಡ್ ಮತ್ತು ವರ್ಗಾನುಸಾರ ಆಯ್ಕೆ ಮಾಡಲಾಗುವುದು. ನಂತರ ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಅರ್ಹರನ್ನು ನೇಮಕ ಮಾಡಲಾಗುವುದು.
				
															
                    
                    
                    
                    
                    































