ನವದೆಹಲಿ : ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ನಂತರ ಭಾರತದ ನೌಕಾಸೇನೆ ಬ್ರಹ್ಮೋಸ್ ಕ್ಷಿಪಣಿಯನ್ನು ಯುದ್ಧನೌಕೆಯಿಂದ ಹಾರಿಸಿದೆ.
ಭಾರತೀಯ ಯುದ್ಧನೌಕೆಗಳು ಅರೇಬಿಯನ್ ಸಮುದ್ರದಲ್ಲಿ ಅನೇಕ ಹಡಗು ವಿರೋಧಿ ಗುಂಡಿನ ದಾಳಿಗಳನ್ನು ನಡೆಸಿವೆ. ನೌಕಾಪಡೆಯು ದೇಶದ ಹಿತಾಸಕ್ತಿಗಳನ್ನು ರಕ್ಷಿಸಲು ಸಿದ್ಧವಾಗಿದೆ ಎಂಬುವುದಾಗಿ ಹೇಳಿದೆ. ಎಂದು ಪೋಸ್ಟ್ ಮಾಡಲಾಗಿದೆ.
ಸಮುದ್ರದ ಮಧ್ಯದಲ್ಲಿರುವ ಯುದ್ಧನೌಕೆಯಿಂದ ಬ್ರಹ್ಮೋಸ್ ಮತ್ತು ಕ್ರೂಸ್ ಕ್ಷಿಪಣಿಗಳನ್ನು ಹಾರಿಸುತ್ತಿರುವ ದೃಶ್ಯಗಳನ್ನು ನೌಕಾಪಡೆಯು ಪೋಸ್ಟ್‌ನಲ್ಲಿ ಹಂಚಿಕೊಂಡಿದೆ. ಉಗ್ರರ ದಾಳಿಯ ನಂತರ ಭಾರತ ಇದೀಗ ಪಾಕ್ ವಿರುದ್ಧ ಕೆರಳಿ ಕೆಂಡವಾಗಿದೆ. ಅತ್ತ ಪಾಕಿಸ್ತಾನ ಕ್ಷಿಪಣಿ ಪರೀಕ್ಷೆ ಮಾಡುತ್ತಿದ್ದರೆ ಇತ್ತ ಭಾರತ ಅರಬಿ ಸಮುದ್ರದಲ್ಲಿ ಕ್ಷಿಪಣಿ ಪರೀಕ್ಷೆ ನಡೆಸುತ್ತಿದೆ.