ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ನಂದಿಗಿರಿಧಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರು ಬದಲಾವಣೆಗೆ ಅನುಮೋದನೆ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ‘ಬೆಂಗಳೂರು ಉತ್ತರ’ ಎಂದು ಮರು ನಾಮಕರಣ ಮಾಡಲು ಕ್ಯಾಬಿನೆಟ್ ನಲ್ಲಿ ಸಮ್ಮತಿ ನೀಡಲಾಗಿದೆ.
ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹೆಸರು ಕೂಡ ಬದಲಾವಣೆಯಾಗಲಿದೆ. ಬಾಗೇಪಲ್ಲಿಯನ್ನು ‘ಭಾಗ್ಯನಗರ’ ಎಂದು ಹೆಸರು ಬದಲಾಯಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.!