ಇಸ್ಲಾಮಾಬಾದ್: ಮಸೀದಿಯ ಒಳಗಡೆಯೇ ಬಾಂಬ್ ಸ್ಫೋಟಗೊಂಡ ಪರಿಣಾಮ ಐವರು ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಸಂಭವಿಸಿದೆ.
ನೌಶೇರಾ ಜಿಲ್ಲೆಯ ಅಕೋರಾ ಖಟ್ಟಕ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮದರಸಾದ ಆವರಣದಲ್ಲಿರುವ ಮಸೀದಿಯಲ್ಲಿ ಇಂದು ಪ್ರಾರ್ಥನೆ ಸಲ್ಲಿಸುವ ಸಮಯದಲ್ಲಿ ಬಾಂಬ್ ಸ್ಪೋಟಗೊಂಡಿದೆ.
ಸ್ಫೋಟದಲ್ಲಿ ಗಾಯಗೊಂಡವರ ಪೈಕಿ ಜಮಿಯತ್ ಉಲೇಮಾ-ಎ-ಇಸ್ಲಾಂ-ಸಾಮಿ (ಜೆಯುಐ-ಎಸ್) ನಾಯಕ ಮೌಲಾನಾ ಹಮಿದುಲ್ ಹಕ್ ಹಕ್ಕಾನಿ ಕೂಡ ಸೇರಿದ್ದಾರೆ. ಸ್ಫೋಟ ಸಂಭವಿಸಿದ ಸಂದರ್ಭದಲ್ಲಿ ಅವರು ಪ್ರಾರ್ಥನೆ ಸಲ್ಲಿಸುತ್ತಾ ಮುಂದಿನ ಸಾಲಿನಲ್ಲಿದ್ದರು ಎನ್ನಲಾಗಿದೆ.
ಅಫ್ಘಾನ್ ತಾಲಿಬಾನ್ನೊಂದಿಗೆ ಮೌಲಾನಾ ಹಮಿದುಲ್ ಹಕ್ ಹಕ್ಕಾನಿ ಸಂಪರ್ಕ ಹೊಂದಿದ್ದಾರೆ. ಇಲ್ಲಿಯವರೆಗೆ ಸ್ಫೋಟದ ಹೊಣೆಯನ್ನು ಯಾವುದೇ ಗುಂಪು ವಹಿಸಿಕೊಂಡಿಲ್ಲ.