ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ನನ್ನು ಕೊಲ್ಲುವುದಾಗಿ ಭೂಗತ ಪಾತಕಿ ಲಾರೆನ್ಸ್ ಬಿಷ್ಣೋಯಿ ಮತ್ತು ಅವನ ಸಹಚರರು ಬೆದರಿಕೆಯೊಡ್ಡಿದ್ದಾರೆ. ಈ ಹಿನ್ನೆಲೆ ಇದೀಗ ಸಲ್ಮಾನ್ ಖಾನ್ರ ನಿವಾಸಕ್ಕೆ ಬುಲೆಟ್ ಪ್ರೂಫ್ ಗಾಜುಗಳನ್ನು ಅಳವಡಿಸಲಾಗಿದೆ.
ಈಗಾಗಲೇ ಸಲ್ಮಾನ್ ಖಾನ್ರ ಆಪ್ತ ಮಾಜಿ ಶಾಸಕ ಬಾಬಾ ಸಿದ್ಧಿಖಿಯನ್ನು ಬಿಷ್ಣೋಯಿ ಸಹಚರರು ಕೊಲೆ ಮಾಡಿದ್ದಾರೆ. ಸಲ್ಮಾನ್ ಖಾನ್ಗೆ ಪದೇ ಪದೇ ಜೀವ ಬೆದರಿಕೆ ಬರುತ್ತೇ ಇದೆ. ಕೆಲ ತಿಂಗಳ ಹಿಂದೆ ಸಲ್ಮಾನ್ ಖಾನ್ ಅವರ ಗ್ಯಾಲೆಕ್ಸಿ ನಿವಾಸದ ಮೇಲೆ ಕೆಲ ದುಷ್ಕರ್ಮಿಗಳು ದಾಳಿ ಮಾಡಿದ್ದು, ಅಪಾರ್ಟ್ಮೆಂಟ್ನ ಗಾಜಿನ ಕಿಟಕಿಗಳ ಮೇಲೆ ಶೂಟ್ ಮಾಡಿ ಪರಾರಿಯಾಗಿದ್ದರು. ಪುನಃ ಈ ರೀತಿಯ ದಾಳಿಯಾಗುವ ಸಾಧ್ಯತೆ ಇರುವುದರಿಂದ ಅವರ ನಿವಾಸಕ್ಕೆ ಬುಲೆಟ್ ಪ್ರೂಫ್ ಗಾಜುಗಳನ್ನು ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ.
ಅಪಾರ್ಟ್ಮೆಂಟ್ನ ಕಿಟಕಿಗಳಿಗೆ ಬುಲೆಟ್ ಪ್ರೂಫ್ ಗಾಜುಗಳನ್ನು ಅಳವಡಿಸಲಾಗಿದೆ. ವಿಶೇಷವಾಗಿ ರಸ್ತೆಯ ಬದಿ ಇರುವ ಹಾಗೂ ಇತರೆ ಅಪಾರ್ಟ್ಮೆಂಟ್ಗಳಿಗೆ ಹೊರಗಿನಿಂದ ಕಾಣುವ ಕಿಟಿಕಿಗಳಿಗೆ ಈ ಬುಲೆಟ್ ಪ್ರೂಫ್ ಗಾಜುಗಳನ್ನು ಅಳವಡಿಸಲಾಗಿದೆ. ಇದರೊಂದಿಗೆ ಸಲ್ಮಾನ್ ಖಾನ್ರ ಮನೆಯ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ ಎಂದು ಹೇಳಲಾಗಿದೆ.