ಪಡಿತರ ವಿತರಣಾ ವ್ಯವಸ್ಥೆಯಲ್ಲೂ ಮಹತ್ವದ ಬದಲಾವಣೆ ಆಗಲಿದೆ. ಹಿಂದುಳಿದ ಕುಟುಂಬಗಳಿಗೆ ಆಹಾರ ಭದ್ರತೆ ಖಚಿತಪಡಿಸಿಕೊಳ್ಳಲು ಆದ್ಯತೆ ನೀಡಲಾಗುತ್ತಿದೆ.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿ ಜ.1 ರಿಂದ ಪಡಿತರದ ಜತೆಗೆ 1 ಸಾವಿರ ರೂ. ಹೆಚ್ಚುವರಿ ಆರ್ಥಿಕ ನೆರವು ನೀಡುವ ನಿಯಮ ಜಾರಿಯಾಗಲಿದೆ. ಸರಿ ಸುಮಾರು 80 ಕೋಟಿ ಜನರು ಈ ಪ್ರಯೋಜನ ಪಡೆದುಕೊಳ್ಳಲಿದ್ದಾರೆ.
ಇದೇ ವೇಳೆ ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸದವರ ಕಾರ್ಡ್ ಗಳು ರದ್ದಾಗಲಿವೆ. ಇದಿಷ್ಟೇ ಅಲ್ಲ ನಗರ ಪ್ರದೇಶಗಳಲ್ಲಿ ವಾರ್ಷಿಕ ಆದಾಯ ಮಿತಿ 3 ಲಕ್ಷ ರೂ. ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಾರ್ಷಿಕ ಆದಾಯ ಮಿತಿ 2 ಲಕ್ಷ ರೂ.ಗೆ ನಿಗದಿಯಾಗಲಿದೆ.