ಬೆಂಗಳೂರು; ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿರುವ ಚಿಕ್ಕ ಪುಟ್ಟ ಸಸಿಗಳು ಬೆಳವಣಿಗೆಯನ್ನು ಕಾಣದೆ ಕಾಡು ನಾಶವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಎಲ್ಲ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
ಪರಿಸರಪ್ರೇಮಿಗಳು ಈಗಾಗಲೇ ಈ ಬಗ್ಗೆ ಧ್ವನಿಯನ್ನ ಎತ್ತಿದ್ದು, ಪರಿಸರವನ್ನ ಉಳಿಸಲು ನಾವು ಸೂಕ್ತ ಕ್ರಮವನ್ನ ಕೈಗೊಳ್ಳಬೇಕು ಎಂದು ಸಚಿವ ಈಶ್ವರ ಬಿ ಖಂಡ್ರೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು.