ದೆಹಲಿ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ ವೈದ್ಯಕೀಯ ಕಾರಣಗಳಿಗಾಗಿ ಮಂಗಳವಾರ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಅತ್ಯಾಚಾರ ಪ್ರಕರಣದಲ್ಲಿ 2013ರ ಆಗಸ್ಟ್ 31ರಂದು ಜೋದ್‌ಪುರ ಪೊಲೀಸರು ಅಸಾರಾಂನನ್ನು ಬಂಧಿಸಿದ್ದರು.
ಅಂದಿನಿಂದ ಜೈಲಿನಲ್ಲಿದ್ದಾರೆ. 86ರ ಹರೆಯದ ಅಸಾರಾಂ ಅವರು ಹೃದಯ ಸಂಬಂಧಿ ಕಾಯಿಲೆಯ ಜೊತೆಗೆ ವಿವಿಧ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.