ಲಕ್ನೋ: ಉತ್ತರ ಪ್ರದೇಶ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಗುರುವಾರ ರಾತ್ರಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಆ ಪ್ರದೇಶದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಈ ಇಮೇಲ್ 2 ಲಕ್ಷ ರೂಪಾಯಿ ಸುಲಿಗೆ ಬೇಡಿಕೆ ಇಟ್ಟಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಮತ್ತು ಸೈಬರ್ ತಂಡಗಳನ್ನು ನಿಯೋಜಿಸಲಾಗಿದ್ದು, ಇಮೇಲ್ನ ಮೂಲವನ್ನು ಕಂಡುಹಿಡಿಯಲು ತನಿಖೆ ಆರಂಭಿಸಲಾಗಿದೆ ಎಂದು ಯುಪಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.