ಭಾರತೀಯ ನೌಕಾಪಡೆಯು ವಿವಿಧ ನಾಗರಿಕ ಸಿಬ್ಬಂದಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಿದೆ. ಇದೇ ಬರುವ ಜು.18 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.
ಹುದ್ದೆಗಳಿಗೆ ಅನುಗುಣವಾಗಿ ಹತ್ತನೇ ತರಗತಿ, ಪಿಯುಸಿ, ಡಿಪ್ಲೋಮಾ, ಬಿಎಸ್ಸಿ ಮತ್ತು ಇತರ ವೃತ್ತಿಪರ ಶಿಕ್ಷಣ ಇತ್ಯಾದಿ ಶೈಕ್ಷಣಿಕ ಅರ್ಹತೆಗಳಿರಬೇಕು. ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮುಖೇನ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.
ಭಾರತೀಯ ನೌಕಾಪಡೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಎಲ್ಲಾ ಮಾಹಿತಿಗಳನ್ನು ನಿಖರವಾಗಿ ತಿಳಿದುಕೊಂಡು ಅರ್ಜಿ ಸಲ್ಲಿಸಬೇಕು.