ದಾವಣಗೆರೆ : ಪ್ರಸಕ್ತ ಸಾಲಿಗೆ ನ್ಯಾಮತಿ ತಾಲ್ಲೂಕು ಸೂರಗೊಂಡನಕೊಪ್ಪ ಸಂತಸೇವಾಲಾಲ್ ಪ್ರಾಥಮಿಕ ಪರಿಶಿಷ್ಟ ಜಾತಿಯ ವಸತಿ ಶಾಲೆಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಹೊನ್ನಾಳಿ ಇಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 15 ರೊಳಗಾಗಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಸೀಟ್‌ಗಳ ಲಭ್ಯತೆಯನುಸಾರ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹೊನ್ನಾಳಿ ಇವರನ್ನು ಸಂಪರ್ಕಿಸಲು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ನಾಗರಾಜ ತಿಳಿಸಿದ್ದಾರೆ.