ದಾವಣಗೆರೆ : ಪ್ರಸಕ್ತ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ.35ಕ್ಕಿಂತ ಅಧಿಕ ಅಂಕಗಳನ್ನು ಪಡೆದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ನಿಗಧಿತ ಅರ್ಜಿ ಮತ್ತು ಮಾಹಿತಿ ಪುಸ್ತಕವನ್ನು ಸರ್ಕಾರವು ನಿಗಧಿಪಡಿಸಿದ ಅರ್ಜಿ ಶುಲ್ಕವನ್ನು ಸಾಮಾನ್ಯ ವರ್ಗದವರಿಗೆ ರೂ.100/- ಮತ್ತು ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಇವರಿಗೆ ರೂ.50/- ಸಮೀಪದ ದಾಖಲೆ ಪರಿಶೀಲನೆ ಕೇಂದ್ರದಲ್ಲಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಮೇ.15 ಕೊನೆಯದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರ ಕಚೇರಿ, ಡಿ.ಆರ್.ಆರ್ ಸರ್ಕಾರಿ ಪಾಲಿಟೆಕ್ನಿಕ್, ದಾವಣಗೆರೆ ಸಂಪರ್ಕಿಸಲು ಕಾಲೇಜಿನ ಪ್ರಾಚಾರ್ಯರರು ತಿಳಿಸಿದ್ದಾರೆ.