ದಾವಣಗೆರೆ : ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಬಿ.ಎಡ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ವೆಬ್ಸೈಟ್: https://sevasindhu.karnataka.gov.in ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು, ಅರ್ಜಿ ಸಲ್ಲಿಸಲು ಡಿಸೆಂಬರ್ 25 ಕೊನೆಯದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆ ವೆಬ್ಸೈಟ್: https://dom.karnataka.gov.in ನಲ್ಲಿ ಪಡೆಯಬಹುದು. ಹಾಗೂ ಅಲ್ಪಸಂಖ್ಯಾತರ ಜಿಲ್ಲಾ ಕಛೇರಿ ದೂ.ಸಂ: 08192-250022 ಸಂಪರ್ಕಿಸಬಹುದು.