ಬೆಂ.ಗ್ರಾ.ಜಿಲ್ಲೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ತೀವ್ರತರವಾದ ಮಾನಸಿಕ ರೋಗಿಗಳ ಪುನಶ್ವೇತನಕ್ಕೆ “ಡೇ ಕೇರ್ ಸೆಂಟರ್”(ಮಾನಸದಾರ) ಕೇಂದ್ರವನ್ನು ನಿರ್ದಿಷ್ಟ ಗೊತ್ತುಪಡಿಸಿದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಸ್ಥಾಪಿಸಿ ನಿರ್ವಹಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರೇತರ ಸಂಸ್ಥೆ/ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಸ್ವಯಂ ಸೇವಾ ಸಂಸ್ಥೆಗಳು ಅರ್ಜಿಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಕೊಠಡಿ ಸಂಖ್ಯೆ:207, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ. ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಜೂನ್-26 ರೊಳಗೆ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೊಠಡಿ ಸಂಖ್ಯೆ:207, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ,ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂರವಾಣಿ ಸಂಖ್ಯೆ:080-29787452 ಸಂಪರ್ಕೀಸಬಹುದು ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.