ದಾವಣಗೆರೆ : ದಾವಣಗೆರೆ ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಪತ್ತಿನ ಸಹಕಾರ ಸಂಘದಿಂದ 2022 -23.ನೇ ಸಾಲಿನಲ್ಲಿ ಎಸ್ .ಎಸ್. ಎಲ್. ಸಿ . ಮತ್ತು ಪಿ .ಯು .ಸಿ. ಒಳಗೊಂಡಂತೆ ಶೇಕಡ 90ಕ್ಕಿಂತ ಹೆಚ್ಚು ಅಂಕ ಪಡೆದ ಶೇರುದಾರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಆಯೋಜಿಸಲಾಗಿದೆ.
ಶೇರುದಾರರು ದಾವಣಗೆರೆ ನಗರದ ಹದಡಿ ರಸ್ತೆಯ ಆರೈಕೆ ಆಸ್ಪತ್ರೆಯ ಹಿಂಭಾಗದಲ್ಲಿರುವ ದಾವಣಗೆರೆ ಜಿಲ್ಲಾ ವೀರಶೈವ ಲಿಂಗಾಯಿತ ನೌಕರರ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಲು ಜೂನ್ 6 ರಂದು ಕೊನೆಯ ದಿನವಾಗಿರುತ್ತದೆ.
ಶೇರು ಒಂದಿಲ್ಲದವರು ಜಿಲ್ಲೆಯೊಳಗೆ ಕರ್ತವ್ಯ ನಿರ್ವಹಿಸುತ್ತಿರುವ ವೀರಶೈವ ಲಿಂಗಾಯಿತ ನೌಕರರು ತಮ್ಮ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಹೊಸದಾಗಿ ದಿನಾಂಕ ಜೂನ್ 6 ಒಳಗಾಗಿ ಶೇರುದಾರರಾಗಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸುವ ಸಮಯ ಪ್ರತಿದಿನ ಸಂಜೆ 5 ರಿಂದ ರಾತ್ರಿ 8ರವರೆಗೆ ಅರ್ಜಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8892158006..8762732010..9448697921