ಬೆಂಗಳೂರು: ಐಪಿಎಲ್ ಜ್ವರ ಆರಂಭವಾಗಿದ್ದು, ಮೈದಾನಗಳಲ್ಲಿ ಸಾವಿರಾರು ಅಭಿಮಾನಿಗಳು ಸೇರುವುದರಿಂದ ಕೋವಿಡ್ ಭೀತಿಯೂ ಆವರಿಸಿದೆ.
ಈ ಬೆನ್ನಲ್ಲೇ ರಾಜ್ಯ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಮುಂದಿನ ಪಂದ್ಯ ವೀಕ್ಷಿಸಲು ಬರುವ ಪ್ರೇಕ್ಷಕರಿಗೆ ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರ, ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯಗೊಳಿಸಲಾಗಿದೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಕಾರಣದಿಂದ ಈ ನಿರ್ಧಾರ ಎಂದು ಆರೋಗ್ಯ ಇಲಾಖೆ ಹೇಳಿದೆ.