ಬೆಂಗಳೂರು: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಹಲವು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಕೆ ಜುಲೈ 26ರಿಂದ ಪ್ರಾರಂಭವಾಗಿದ್ದು, ಆಗಸ್ಟ್ 16 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು www.ippbonline.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 21ರಿಂದ 35 ವರ್ಷದೊಳಗೆ ಇರಬೇಕು. ಪದವಿ ಪಡೆದಿರುವ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಹಾಕಲು ಅರ್ಹರು. ಈ ನೇಮಕಾತಿಗಳನ್ನು ಗುತ್ತಿಗೆ ಆಧಾರದ ಮೇಲೆ ನಡೆಸಲಾಗುತ್ತಿದೆ.