ಬಾಲಿವುಡ್ ಸೂಪರ್ ಸ್ಟಾರ್ ಬಹುಭಾಷಾ ತಾರೆ ರಶ್ಮಿಕಾ ಮಂದಣ್ಣ ತೆರೆಹಂಚಿಕೊಂಡಿರುವ ‘ಛಾವಾ’ ಬಿಡುಗಡೆ ಹೊಸ್ತಿಲಿನಲ್ಲಿದೆ. ಈ ಬಹುನಿರೀಕ್ಷಿತ ಚಿತ್ರ ಫೆಬ್ರವರಿ 14ರಂದು ತೆರೆಕಾಣಲಿದೆ. ಬಿಡುಗಡೆ ಹೊಸ್ತಿಲಿನಲ್ಲಿರುವ ಸಿನಿಮಾದ ಪ್ರಚಾರ ಪ್ರಾರಂಭವಾಗಿದ್ದು, ಚಿತ್ರ ತಯಾರಕರು ನಿನ್ನೆಯಷ್ಟೇ ಮುಂಬೈನಲ್ಲಿ ಅದ್ಧೂರಿ ಟ್ರೇಲರ್ ರಿಲೀಸ್ ಈವೆಂಟ್ ಹಮ್ಮಿಕೊಂಡಿದ್ದರು. ಆದರೆ ಕಾರ್ಯಕ್ರಮದಲ್ಲಿ ನಟಿ ರಶ್ಮಿಕಾ ಮಂದಣ್ಣ ತಮ್ಮ ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ. ನಟಿಯ ಆ ಹೇಳಿಕೆಗಳೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
ಕೆಲವು ದಿನಗಳ ಹಿಂದೆ ರಶ್ಮಿಕಾ ತಮ್ಮ ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಅಪಘಾತದಲ್ಲಿ ಕಾಲಿಗೆ ಗಾಯ ಮಾಡಿಕೊಂಡಿದ್ದರು.
ಸ್ಟಾರ್ ಹೀರೋಯಿನ್ ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅವರು ತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ಸಿನಿಮಾಗಳನ್ನು ಮಾಡುತ್ತಾ ಫುಲ್ ಬ್ಯುಸಿಯಾಗಿದ್ದಾರೆ.. ಪುಷ್ಪ 2 ತೆಲುಗಿನಲ್ಲಿ ಭಾರೀ ಹಿಟ್ ಆಗಿತ್ತು. ಅಲ್ಲು ಅರ್ಜುನ್ ಅಭಿನಯದ ಚಿತ್ರ ರೂ. 18 ನೂರು ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಕನ್ನಡ ಇಂಡಸ್ಟ್ರಿಯಿಂದ ಬಂದ ಈ ಚೆಲುವೆ ತೆಲುಗಿನಲ್ಲಿ ಸತತ ಸಿನಿಮಾ ಮಾಡುತ್ತಿದ್ದಾರೆ.. ಜೊತೆಗೆ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ನಾಯಕಿಯಾಗಿ ಮಿಂಚಿದ್ದಾರೆ. ಇತ್ತೀಚೆಗಷ್ಟೇ ನಿವೃತ್ತಿಯ ಬಗ್ಗೆ ರಶ್ಮಿಕಾ ಆಸಕ್ತಿದಾಯಕ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಇದನ್ನು ಕೇಳಿ ಹಲವರು ಶಾಕ್ ಆಗಿದ್ದಾರೆ. ಇತ್ತೀಚೆಗೆ ರಶ್ಮಿಕಾ ಕಾಲಿಗೆ ಗಾಯ ಮಾಡಿಕೊಂಡಿದ್ದು ಗೊತ್ತೇ ಇದೆ.
ಈ ಚಿತ್ರದ ಬಗ್ಗೆ ಮಾತನಾಡಿದ ರಶ್ಮಿಕಾ, ನಾನು ದಕ್ಷಿಣದಿಂದ ಬಂದು ಮಹಾರಾಣಿ ಯೇಸುಬಾಯಿ ಪಾತ್ರದಲ್ಲಿ ನಟಿಸಿದ್ದೇನೆ. ಇದು ನನ್ನ ಜೀವನದಲ್ಲಿ ನಾನು ಮಾಡಿದ ವಿಶೇಷ ಪಾತ್ರ. ಈ ಚಿತ್ರದ ನಂತರ ನಾನು ನಿವೃತ್ತಿ ಹೊಂದಲು ಬಯಸುತ್ತೇನೆ ಎಂದು ನಿರ್ದೇಶಕ ಲಕ್ಷ್ಮಣ್‌ಗೆ ಹೇಳಿದ್ದೆ’ ಎಂದು ನಟಿ ಹೇಳಿದ್ದಾರೆ.. ಸದ್ಯ ರಶ್ಮಿಕಾ ಮಂದಣ್ಣಗೆ ಚಿತ್ರರಂಗದಲ್ಲಿ ಬೇಡಿಕೆ ಇದೆ. ಇದೇ ವೇಳೆ ನಟಿ ಈ ರೀತಿ ಕಾಮೆಂಟ್ ಮಾಡಿರುವುದು ಇಂಡಸ್ಟ್ರಿಯಲ್ಲಿ ಶಾಕ್ ನೀಡಿದೆ.