ಬೆಂಗಳೂರು: ಹಾಲಿನ ದರವನ್ನು ಪ್ರತಿ ಲೀಟರ್ಗೆ ₹3 ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದ್ದು, ಹಾಲಿನ ದರವನ್ನು ಕನಿಷ್ಠ ₹5ಕ್ಕೆ ಹೆಚ್ಚಿಸಬೇಕು ಎಂದು ಹಾಲು ಒಕ್ಕೂಟಗಳು ಒತ್ತಾಯಿಸುತ್ತಿವೆ.
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಮೂಲಗಳ ಪ್ರಕಾರ ಕನಿಷ್ಠ ₹3 ಹೆಚ್ಚಿಸುವ ಪ್ರಸ್ತಾವಕ್ಕೆ ಮುಖ್ಯಮಂತ್ರಿ ಅವರ ಅನುಮೋದನೆ ಬೇಕಾಗಿದೆ. ಅಧಿವೇಶನದ ಬಳಿಕ ಒಪ್ಪಿಗೆ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.